HomeKarnatakaಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ ಬೃಹತ್ 'ಉದ್ಯೋಗ ಮೇಳ' ಆಯೋಜನೆ |JOB...

ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬಳ್ಳಾರಿಯಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ |JOB FAIR

ಬಳ್ಳಾರಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್ಗಾರ್ ಮೇಳ ಅಡಿ ಜ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular