ಚುನಾವಣೆಯಲ್ಲಿ ಆಯ್ಕೆ ಬಗ್ಗೆ ತಕರಾರು: ಶಾಸಕ ರಾಜೇಗೌಡ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಯ್ಕೆ ಪ್ರಶ್ನಿಸಿ ತಮ್ಮ ವಿರುದ್ಧ ಆರೋಪ ಮಾಡಿರುವ ಬಿಜೆಪಿ ನಾಯಕರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಮಾಜಿ ಸಚಿವ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್ ಗೆ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಕಪ್ಪು ಹಣ ಬಳಕೆ, ಮತ್ತಿತರೆ ಅಸ್ಪಷ್ಟ ಆರೋಪಗಳನ್ನು ಮಾಡಿದ್ದಾರೆ ಎಂದು ರಾಜೇಗೌಡರ ಹಿರಿಯ ವಕೀಲ ಶಾಮ್ ದಿವಾನ್ ವಾದ ಮಂಡಿಸಿದ್ದರು.

ಆಧಾರ ರಹಿತ ಆರೋಪಗಳ ಬಗ್ಗೆ ಕಳಕಳಿ ಹೊಂದಿದ್ದೇವೆ. ಆದರೆ ಸಾಕ್ಷ್ಯ ಹಾಜರುಪಡಿಸುವಲ್ಲಿ ಕಾನೂನಿನಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ. ಚುನಾವಣಾ ಅರ್ಜಿಯಲ್ಲಿನ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಿದಾಗ ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮ ಅಹವಾಲು ಸಲ್ಲಿಸಬಹುದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭುಯಾನ್ ಅವರು ತಿಳಿಸಿದ್ದು, ರಾಜೇಗೌಡರ ಅರ್ಜಿಯನ್ನು ಪರಿಗಣಿಸಲು ಯಾವುದೇ ಸಕಾರಣವಿಲ್ಲ ಎಂದು ಹೇಳಿದೆ.

2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡರ ಆಯ್ಕೆ ಪ್ರಶ್ನಿಸಿ, ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read