HomeKarnatakaGOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯಕ್ಕೆ ಗುಡ್ ನ್ಯೂಸ್ : 'ಜವಳಿ ಉದ್ದಿಮೆ'...

GOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯಕ್ಕೆ ಗುಡ್ ನ್ಯೂಸ್ : ‘ಜವಳಿ ಉದ್ದಿಮೆ’ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತೀ ಸಣ್ಣ (ಎಸ್.ಎಂ.ಇ.) ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆ .

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ 080-29501945 ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular