HomeKarnatakaಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಶಾಕ್: ಪಡಿತರ ಚೀಟಿ ರದ್ದುಪಡಿಸಲು ಸಿಎಂ ಖಡಕ್ ಸೂಚನೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗಿದೆ.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ ಬಿಪಿಎಲ್ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ಪಟ್ಟಿಯಿಂದ ತೆಗೆಯಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ ದಾರನನ್ನು ರದ್ದು ಮಾಡಬಾರದು ಎಂದು ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಆ ಬಳಿಕ ಅಂತವರಿಗೆ ನೊಟೀಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular