HomeIndiaBIG NEWS : ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆಗೆ ವರ್ಷದ ಸಂಭ್ರಮ : ಇಂದಿನಿಂದ 3 ದಿನ...

BIG NEWS : ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆಗೆ ವರ್ಷದ ಸಂಭ್ರಮ : ಇಂದಿನಿಂದ 3 ದಿನ ವಿಶೇಷ ಪೂಜೆ

ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಈ ವೇಳೆ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವು ಲಕ್ಷಾಂತರ ಹಿಂದೂಗಳಿಗೆ ನಂಬಿಕೆ, ಭಕ್ತಿ ಮತ್ತು ಪರಿಶ್ರಮದ ಸಂಕೇತವಾಗಿ ನಿಂತಿದೆ.ಜನವರಿ 22, 2024 ರಂದು ಭಕ್ತರು ಮತ್ತು ಗಣ್ಯರು ಭಾಗವಹಿಸಿದ ಭವ್ಯ ಸಮಾರಂಭದಲ್ಲಿ ದೇವಾಲಯವನ್ನು ಉದ್ಘಾಟಿಸಲಾಯಿತು. ಆದರೆ ಹಿಂದೂ ಪಂಚಾಂಗದ ಪ್ರಕಾರ ಈ ಸಂಭ್ರಮಕ್ಕೆ ಜ.11ರಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ (ಪ್ರತಿಷ್ಠಾ ದ್ವಾದಶಿ) ಹಮ್ಮಿಕೊಳ್ಳಲಾಗಿದೆ.

ಕಳೆದ ವರ್ಷ ಜನವರಿ 22ರಂದು ಐತಿಹಾಸಿಕ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಆಹ್ವಾನಿತ 110 ಗಣ್ಯರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದೆ. ಗಣ್ಯರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಗಣೀರ ಜೊತೆಗೆ ಜನಸಾಮಾನ್ಯರು ಕೂಡ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular