HomeIndiaBREAKING : ದೆಹಲಿಯಲ್ಲಿ ನೂತನ AICC ಕಚೇರಿ 'ಇಂದಿರಾ ಭವನ' ಉದ್ಘಾಟಿಸಿದ ಸೋನಿಯಾ ಗಾಂಧಿ |WATCH...

BREAKING : ದೆಹಲಿಯಲ್ಲಿ ನೂತನ AICC ಕಚೇರಿ ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ ಗಾಂಧಿ |WATCH VIDEO

ನವದೆಹಲಿ : ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರು ನೂತನ ಎಐಸಿಸಿ ಕಚೇರಿ ಇಂದಿರಾ ಭವನವನ್ನು ಉದ್ಘಾಟಿಸಿದ್ದಾರೆ.

ಈ ವೇಳೆ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರು ಹಾಜರಿದ್ದರು. ನೂತನ ಎಐಸಿಸಿ ಕಚೇರಿಗೆ ಇಂದಿರಾ ಭವನ ಎಂದು ನಾಮಕರಣ ಮಾಡಲಾಗಿದೆ.

ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಚಟುವಟಿಕೆಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪಕ್ಷದ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸಲು ‘ಇಂದಿರಾ ಭವನ’ವನ್ನು ವಿನ್ಯಾಸಗೊಳಿಸಲಾಗಿದೆ. 2009ರ ಡಿಸೆಂಬರ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಈ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕಟ್ಟಡವು ಈಗ ಉದ್ಘಾಟನೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular