ಗಮನಿಸಿ : ಕರಾಮುವಿವಿ ಕಲಿಕಾರ್ಥಿ ಕಾಲೇಜು ಆರಂಭಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ಪ್ರತಿ ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲೂ ‘ಕರಾಮುವಿ ಕಲಿಕಾರ್ಥಿ ಕಾಲೇಜು ಆರಂಭಿಸಲು’ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬೆಸೈಟ್ www.ksoumysuru.ac.in https://ksoupuportal.com/reg_sc/studycentre registr ation.aspx ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ, ನಂತರ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜನವರಿ, 18 ಕೊನೆಯ ದಿನವಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರ ಆರಂಭಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರಿಡಾಂಗಣ ಕಟ್ಟಡ, ಮಡಿಕೇರಿ-571201 ದೂರವಾಣಿ ಸಂಖ್ಯೆ 08272-201147, 8073342310 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read