HomeKarnatakaBIG NEWS: ಶರಣಾದ 6 ನಕ್ಸಲರು ಪೊಲೀಸ್ ಕಸ್ಟಡಿಗೆ, ಇಂದಿನಿಂದ ವಿಚಾರಣೆ

BIG NEWS: ಶರಣಾದ 6 ನಕ್ಸಲರು ಪೊಲೀಸ್ ಕಸ್ಟಡಿಗೆ, ಇಂದಿನಿಂದ ವಿಚಾರಣೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 6 ಮಂದಿ ನಕ್ಸಲರು ಇತ್ತೀಚೆಗೆ ಶರಣಾಗತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ನ್ಯಾಯಾಲಯ 6 ನಕ್ಸಲರನ್ನು ಪೊಲೀಸ್ ವಶಕ್ಕೆ ನೀಡಿದೆ.

ಜನವರಿ 23ರ ವರೆಗೆ ನಕ್ಸಲರನ್ನು ಪೊಲೀಸ್ ವಶಕ್ಕೆ ನೀಡಿದ್ದು, ಇಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ನಕ್ಸಲರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಚಿಕ್ಕಮಗಳೂರು ಎಸ್ಪಿ ನೇತೃತ್ವದಲ್ಲಿ ಇಂದು ನಕ್ಸಲರ ವಿಚಾರಣೆ ನಡೆಸಲಾಗುವುದು. ಶರಣಾಗತರಾಗಿರುವ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಜಯಣ್ಣ, ಜೀಶಾ, ವಸಂತ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಶಸ್ತ್ರಾಸ್ತ್ರ ಸೇರಿದಂತೆ ಹಳೆಯ ಪ್ರಕರಣಗಳ ಕುರಿತಾಗಿ ವಿಚಾರಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular