ಇನ್ನೇನು ಜನವರಿ 22 ರಿಂದ ಫೆಬ್ರವರಿ ಎರಡರವರೆಗೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ಐದು ಟಿ ಟ್ವೆಂಟಿ ಪಂದ್ಯ ನಡೆಯಲಿದ್ದು, ಯುವ ಭಾರತ ತಂಡ ಸಜ್ಜಾಗಿದೆ. ಇದರ ಬೆನ್ನಲ್ಲೇ ಫೆಬ್ರವರಿ 19ರಂದು ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಬಹುತೇಕ ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದೀಗ BCCI ಚಾಂಪಿಯನ್ಸ್ ಟ್ರೋಫಿಗಾಗಿ ಭಾರತದ 15 ಬಲಿಷ್ಠ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದೆ.
ಭಾರತ ತಂಡ; ರೋಹಿತ್ ಶರ್ಮಾ (ನಾಯಕ),ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವಿಂದ್ರ ಜಡೇಜಾ, ರಿಷಬ್ ಪಂತ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ,