HomeKarnatakaBIG NEWS : ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ’ ಸ್ಪರ್ಧೆ ಆಯೋಜಿಸುವ ಬಗ್ಗೆ 'ಶಿಕ್ಷಣ ಇಲಾಖೆ'...

BIG NEWS : ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ’ ಸ್ಪರ್ಧೆ ಆಯೋಜಿಸುವ ಬಗ್ಗೆ ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ’ ಸ್ಪರ್ಧೆ ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ:27.01.2025 ಅಥವಾ 28.01.2025 ರಂದು ನಡೆಸಲು ಉಲ್ಲೇಖ(1)ರಂತೆ ಸೂಚಿಸಿರುತ್ತಾರೆ. ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮವನ್ನು ಆಯೋಜನೆಗೊಳಿಸುವ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿವರವನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ. ರವರಿಗೆ ಕೂಡಲೇ ಸಲ್ಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ರವರಿಗೆ ತಿಳಿಸಿದೆ.

ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ರವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿರವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಿ ದಿನಾಂಕವನ್ನು ನಿಗಧಿಪಡಿಸಿಕೊಂಡು ತುರ್ತು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದ ವಿಜೇತರ ಪಟ್ಟಿಯನ್ನು ಸಂಗ್ರಹಿಸಿ, ಉಲ್ಲೇಖಿತ ಸುತ್ತೋಲೆಯಲ್ಲಿನ ಅಂಶಗಳಂತೆ ನಿಯಮಾನುಸಾರ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮವಹಿಸುವುದು. ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಶಿಷ್ಟಾಚಾರವನ್ನು ಪಾಲಿಸಲು ಕ್ರಮವಹಿಸುವಂತೆ ಹಾಗೂ ಜಿಲ್ಲೆಯಲ್ಲಿನ ಇಲಾಖೆಯ ವಿವಿಧ ಕಛೇರಿಗಳ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಘಟಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular