HomeKarnatakaBREAKING : ರಾಜ್ಯದಲ್ಲಿ ಹಾಡಹಗಲೇ ಮತ್ತೊಂದು ದರೋಡೆ : ಉದ್ಯಮಿಯ ಕಾರು ಸಮೇತ ಹಣ ಕಸಿದುಕೊಂಡು...

BREAKING : ರಾಜ್ಯದಲ್ಲಿ ಹಾಡಹಗಲೇ ಮತ್ತೊಂದು ದರೋಡೆ : ಉದ್ಯಮಿಯ ಕಾರು ಸಮೇತ ಹಣ ಕಸಿದುಕೊಂಡು ಪರಾರಿ.!

ಮೈಸೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನಲ್ಲಿ ಹಾಡಹಗಲೇ  ಉದ್ಯಮಿಯ  ಕಾರನ್ನು ಅಡ್ಡಗಟ್ಟಿ ರಾಬರಿ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿಯಲ್ಲಿ ಈ ಘಟನೆ ನಡೆದಿದೆ.ಮುಸುಕುಧಾರಿಗಳ ಗ್ಯಾಂಗ್ ಹಾಡಹಗಲೇ ಈ ಕೃತ್ಯ ನಡೆಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.ಕೇರಳದ ಮೂಲದ ಉದ್ಯಮಿಯ ಕಾರು, ಹಣ, ಹಾಗೂ ಮೊಬೈಲ್ ಕಿತ್ತುಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಸ್ತೆಯಲ್ಲಿ ಬರುತ್ತಿದ್ದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಮೇತ ಆತನ ಬಳಿಯಿದ್ದ ಹಣ, ಮೊಬೈಲ್ ಕಸಿದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ರಾಜ್ಯದಲ್ಲಿ ಸಾಲು ಸಾಲು ಬ್ಯಾಂಕ್, ಎಟಿಎಂ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಮೈಸೂರಿನಲ್ಲಿ ಮತ್ತೊಂದು ದರೋಡೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular