HomeKarnatakaBIG NEWS : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದಿಂದ ನಾಳೆ 'ಗಾಂಧಿ ಭಾರತ' ಕಾರ್ಯಕ್ರಮ...

BIG NEWS : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದಿಂದ ನಾಳೆ ‘ಗಾಂಧಿ ಭಾರತ’ ಕಾರ್ಯಕ್ರಮ ಆಯೋಜನೆ

ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರ ನಾಳೆ ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಷ್ಟ್ರದ ಇಂದಿನ ಅಗತ್ಯವೆಂದರೆ, ಅದು.. ಗಾಂಧಿ ಆದರ್ಶಗಳನ್ನು ಅನುಸರಿಸುವುದು ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಗಾಂಧಿ ಕನಸನ್ನು ನನಸಾಗಿಸುವುದು ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರ ಮಂಗಳವಾರ ಬೆಳಿಗ್ಗೆ 10.30 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆದರದ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವದ ಸ್ಮರಣಾರ್ಥವಾಗಿ ಜನವರಿ 21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.ಗಾಂಧಿ ಭಾರತವನ್ನು ಮರುನಿರ್ಮಿಸಲು ನಮ್ಮೊಂದಿಗೆ ಕೈಜೋಡಿಸಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular