HomeKarnatakaBIG NEWS: ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳ ದಂಧೆ ತಡೆಗೆ ನೂತನ ಕಾಯ್ದೆ ಜಾರಿ

BIG NEWS: ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳ ದಂಧೆ ತಡೆಗೆ ನೂತನ ಕಾಯ್ದೆ ಜಾರಿ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ದಂಧೆ ಹಾಗೂ ಮೀಟರ್‌ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವರಾದ ಹೆಚ್‌.ಕೆ.ಪಾಟೀಲ್‌ ಅವರು ತಿಳಿಸಿದ್ದಾರೆ.

ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ರಾಜ್ಯದ ವಿವಿಧೆಡೆ ಖಾಸಗಿ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗಿದ್ದು, ಹೊಸ ಕಾನೂನಿನ ಮೂಲಕ ಮೀಟರ್ ಬಡ್ಡಿ ಮಾಫಿಯಾ, ಖಾಸಗಿ ಹಣಕಾಸು ಸಂಸ್ಥೆಗಳ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ನಿಗದಿತ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸುವಂತಿಲ್ಲ. ಸಾಲ ವಸೂಲಿಗೆ ಕಿರುಕುಳ ನೀಡಿದಲ್ಲಿ ಕನಿಷ್ಠ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ ವಿಧಿಸುವ ಬಗ್ಗೆ ಕಾನೂನು ತರಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular