HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಷ್ಟ್ರೀಯ, ನಾಡಹಬ್ಬ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಸೂಚನೆ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಷ್ಟ್ರೀಯ, ನಾಡಹಬ್ಬ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬದ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಜನವರಿ 26 ಗಣರಾಜ್ಯೋತ್ಸವ ಸೇರಿದಂತೆ ಎಲ್ಲ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬಗಳ ದಿನಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.

ಪಿಎಂ ಪೋಷನ್- ಮಧ್ಯಾಹ್ನದ ಬಿಸಿಯೂಟ ಯೋಜನೆ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬ ಕನ್ನಡ ರಾಜ್ಯೋತ್ಸವ ದಿನಗಳನ್ನು ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ರಾಷ್ಟ್ರೀಯ ಹಬ್ಬಗಳು ಮತ್ತು ನಾಡಹಬ್ಬದ ದಿನಗಳಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ತಪ್ಪದೇ ಬಿಸಿಯೂಟ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular