ಬಿಜೆಪಿಯ 66 ಶಾಸಕರಲ್ಲಿ 60 ಜನ ವಿಜಯೇಂದ್ರ ಪರ: ಶಾಸಕ ಶರಣು ಸಲಗರ

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ರಾಜ್ಯದ 66 ಬಿಜೆಪಿ ಶಾಸಕರಲ್ಲಿ 60 ಜನ ವಿಜಯೇಂದ್ರ ಪರವಾಗಿದ್ದೇವೆ ಎಂದು ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ವಿಜಯೇಂದ್ರ ಯಾವುದೇ ಲಾಭದಿಂದ ರಾಜ್ಯಾಧ್ಯಕ್ಷ ಸ್ಥಾನ ಪಡೆದವರಲ್ಲ. ಬಿಜೆಪಿಯ ಹೈಕಮಾಂಡ್ ವಿಜಯೇಂದ್ರ ಅವರ ಸಂಘಟನಾ ಶಕ್ತಿ ಗುರುತಿಸಿ ಜವಾಬ್ದಾರಿ ನೀಡಿದೆ. ನಾನು ಸೇರಿದಂತೆ ಅನೇಕರು ಶಾಸಕರಾಗುವಲ್ಲಿ ವಿಜಯೇಂದ್ರ ಸೇರಿದಂತೆ ಹಲವು ನಾಯಕರ ಪಾಲು ಇದೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಚಿಕ್ಕವರಿದ್ದು, ತಿಳಿಯದೇ ಏನಾದರೂ ತಪ್ಪಾಗಿದ್ದರೆ ರಾಷ್ಟ್ರೀಯ ಅಧ್ಯಕ್ಷರು ತಿಳಿಸಿ ಹೇಳುತ್ತಾರೆ. ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸ ಇದೆ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಿಶ್ಚಿತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read