BIG NEWS: 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್: 3 ಸಾವಿರ ಮೆ.ವ್ಯಾಟ್ ವಿದ್ಯುತ್ ಸಂಪೂರ್ಣ ಕೃಷಿಗೆ ಬಳಕೆ

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈಗಾಗಲೇ 10 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಿಸಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಪಾವಗಡ, ಶಿರಾ ಸುತ್ತಮುತ್ತ ಹೊಸದಾಗಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಿಸಲಾಗುವುದು. ಜಮೀನು ಕೊಡಲು ರೈತರೇ ಮುಂದೆ ಬಂದಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡರೆ ಮೂರು ಸಾವಿರ ಮೆಗಾವಾಟ್‌ ವಿದ್ಯುತ್‌ ಉತ್ಪಾದನೆಯಾಗಲಿದೆ. ಅದನ್ನು ಸಂಪೂರ್ಣ ಕೃಷಿಗೆ ವಿನಿಯೋಗಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಖಾಲಿ ಇರುವ 3 ಸಾವಿರ ಲೈನ್‌ಮೆನ್‌ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read