HomeKarnatakaBREAKING : ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ಸರ್ಕಾರ ನಿರ್ಧಾರ, ಮಹಿಳೆಯರಿಗೆ ಕಡಿಮೆ...

BREAKING : ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ಸರ್ಕಾರ ನಿರ್ಧಾರ, ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತೆ ಸಾಲ.!

ಬೆಂಗಳೂರು : ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕಡಿಮೆ ಬಡ್ಡಿ ದರದಲ್ಲಿ ಜನರಿಗೆ ಸಾಲ ಸಿಗಬೇಕೆಂಬ ಉದ್ದೇಶದಲ್ಲಿ ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ನಿರ್ಧರಿಸಿದೆ. ಈ ಬಗ್ಗೆ ಸಚಿವ ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆ ಬಗ್ಗೆ ಹಣಕಾಸು ಇಲಾಖೆ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜಸ್ಥಾನ, ತೆಲಂಗಾಣದಲ್ಲಿ ಅಧ್ಯಯನ ಮಾಡಲಾಗಿದೆ. ಅಧಿಕಾರಿಗಳು ಈ ಬಗ್ಗೆ ಅಧ್ಯಯನ ನಡೆಸಿ ಕಾರ್ಯರೂಪಕ್ಕೆ ತರಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿದ್ದಾರೆ.ಈ ನಿಟ್ಟಿನಲ್ಲಿ ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಹೊಸ ಪ್ಲ್ಯಾನ್ ಮಾಡಿದೆ.ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿಯಾಗಿದೆ.ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮೈಕ್ರೋ ಫೈನಾನ್ಸ್’ ಹಾವಳಿ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇನ್ನೊಂದೆಡೆ ಮಹಿಳೆಯರು ತಮ್ಮ ಮಾಂಗಲ್ಯ ಭಾಗ್ಯ ಉಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಕಳುಸಿಸಿ ವಿಶೇಷ ಅಭಿಯಾನ ನಡೆಸುತ್ತಿದ್ದಾರೆ.

ಮೈಕ್ರೋ ಫೈನಾನ್ಸ್ ನಿಂದಾಗಿ ನಮ್ಮ ಮಾಂಗಲ್ಯಕ್ಕೆ ಕುತ್ತುಬಂದಿದೆ. ಸಾಲ ಪಡೆದವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಗಂಡಂದಿರ ಜೀವ ಉಳಿಸಿ, ನಮ್ಮ ಮಾಂಗಲ್ಯ ಭಾಗ್ಯ ಕಾಪಾಡಿ ಎಂದು ಹಾವೇರಿ ಮಹಿಳೆಯರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular