HomeKarnatakaಸಂಗೊಳ್ಳಿ ರಾಯಣ್ಣ ಬದುಕು ಸ್ಪೂರ್ತಿದಾಯಕ: ಸಿದ್ಧರಾಮಯ್ಯ

ಸಂಗೊಳ್ಳಿ ರಾಯಣ್ಣ ಬದುಕು ಸ್ಪೂರ್ತಿದಾಯಕ: ಸಿದ್ಧರಾಮಯ್ಯ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮೈಸೂರು ರಸ್ತೆತಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194ನೇ ಪುಣ್ಯಸ್ಮರಣೆ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮಾತನಾಡಿದರು.

ಕಿತ್ತೂರು ರಾಣಿ ಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular