HomeKarnatakaBIG NEWS: ಜೆಡಿಎಸ್ ಸಂಘಟನೆಗೆ ದೇವೇಗೌಡರ ರಾಜ್ಯ ಪ್ರವಾಸ

BIG NEWS: ಜೆಡಿಎಸ್ ಸಂಘಟನೆಗೆ ದೇವೇಗೌಡರ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಗಾಗಿ ಮಾಋ೵ಛ೵ ನಿಂದ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠರಾದ ಹೆಚ್‍.ಢೀ. ದೇವೇಗೌಡರು ಹೇಳಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುತ್ತೇನೆ. ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಕಾರ್ಯಕರ್ತರು ,ಮುಖಂಡರೊಂದಿಗೆ ಪಕ್ಷ ಸಂಘಟಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಹೆಚ್‍.ಢೀ. ಕುಮಾರಸ್ವಾಮಿ ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ. ನಾನು ಮತ್ತು ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲಾ ಹಿರಿಯರು, ಕಿರಿಯರೊಂದಿಗೆ ಸೇರಿ ಪಕ್ಷದ ಕಾರ್ಯಕರ್ತರೊಂದಿಗೆ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುತ್ತೇವೆ .ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬೆಂಗಳೂರು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular