HomeKarnatakaLPG ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ವಿತರಣೆ ಉಚಿತ

LPG ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ವಿತರಣೆ ಉಚಿತ

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು ಮಾಡಲು ಆಹಾರ ಇಲಾಖೆ ಸೂಚನೆ ನೀಡಿದೆ.

ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಬಳ್ಳಾರಿ ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ.

5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್‌ಗೆ 1.60 ರೂ.ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ(ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular