BIG NEWS: 32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ- ಖಾತಾ ವಿತರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಉಳಿದ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳಲ್ಲಿ 30 ರಿಂದ 32 ಲಕ್ಷ ನಿವೇಶನ, ಆಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ ಇಲ್ಲ. ಈ ಎಲ್ಲಾ ಆಸ್ತಿಗಳಿಗೆ ಒಂದು ಬಾರಿಗೆ ಪರಿಹಾರವಾಗಿ, ಎಲೆಕ್ಟ್ರಾನಿಕ್ ಬಿ ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಫೆಬ್ರವರಿ 10ರೊಳಗೆ ಈ ಬಗ್ಗೆ ಸುತ್ತೋಲೆ ಹೊರಡಿಸಲಿದ್ದು, ಮೂರು ತಿಂಗಳಲ್ಲಿ ಅಭಿಯಾನದ ರೂಪದಲ್ಲಿ ಬಿ ಖಾತಾ ವಿತರಿಸಬೇಕು. ನಗರಸಭೆ, ಪುರಸಭೆ ಅಧಿಕಾರಿಗಳೇ ಮನೆಮನೆಗೆ ಹೋಗಿ ಬಿ ಖಾತಾ ನೀಡಬೇಕು ಎಂದು ಹೇಳಿದ್ದಾರೆ.

ಅನಧಿಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಹೀಗಾಗಿ ಅದನ್ನು ಪಾಲಿಸಬೇಕಾದ ತುರ್ತು ಎದುರಾಗಿದೆ. ಎಷ್ಟು ನಿವೇಶನಗಳು ಇವೆ ಎಂದು ಗುರುತಿಸಿ ಸರ್ಕಾರವೇ ಬಿ ಖಾತಾ ಮಾಡಿಕೊಡಲಿದೆ. ನಂತರ ರಾಜ್ಯದಲ್ಲಿ ಬಿ ಖಾತಾ ಇರುವುದಿಲ್ಲ. ಎ ಖಾತಾ ಮಾತ್ರ ಇರಲಿದೆ. ಮುಂದಿನ ದಿನಗಳಲ್ಲಿ ಅನಧಿಕೃತ ನಿವೇಶನಗಳಿಗೆ ಅವಕಾಶ ಇರುವುದಿಲ್ಲ. ನಗರ ವ್ಯಾಪ್ತಿಯಲ್ಲಿ ಅಭಿಯಾನ ಮುಗಿದ ಬಳಿಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಇದೇ ಮಾದರಿಯನ್ನು ಆರಂಭಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read