HomeKarnatakaವೇತನ ಪರಿಷ್ಕರಣೆಗೆ ಒತ್ತಾಯಿಸಿ ಫೆ. 1ರಿಂದ ಮುಷ್ಕರಕ್ಕೆ ಕೆಎಂಎಫ್ ನೌಕರರ ನಿರ್ಧಾರ

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಫೆ. 1ರಿಂದ ಮುಷ್ಕರಕ್ಕೆ ಕೆಎಂಎಫ್ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದ ವರದಿಯ ಅನ್ವಯ ವೇತನ ಪರಿಷ್ಕರಣೆ ಮತ್ತು ಸೌಲಭ್ಯಗಳನ್ನು ಯಥಾವತ್ ಜಾರಿಗೊಳಿಸಬೇಕು. ಇಲ್ಲದಿದ್ದರೆ ಫೆಬ್ರವರಿ 1ರಿಂದ ಮುಷ್ಕರ ನಡೆಸಬೇಕು ಎಂದು ಕೆಎಂಎಫ್ ನೌಕರರು ಒತ್ತಡ ಹೇರತೊಡಗಿದ್ದಾರೆ.

ಕೆಎಂಎಫ್ ಮತ್ತು ಎಲ್ಲಾ ಒಕ್ಕೂಟಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವೇತನ ಪರಿಷ್ಕರಣೆ ಮತ್ತು ಸೌಲಭ್ಯ ಅನ್ವಯಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಆಕ್ರೋಶಗೊಂಡಿದ್ದು, ಬೇಡಿಕೆ ಈಡೇರಿಸಲು ಫೆಬ್ರವರಿ 1ರಿಂದ ಮುಷ್ಕರ ಕೈಗೊಳ್ಳುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒತ್ತಡ ಹಾಕುತ್ತಿದ್ದಾರೆ. ಈ ಕುರಿತಾಗಿ ಕೆಎಂಎಫ್ ಅಧಿಕಾರಿಗಳ ಸಂಘದಿಂದ ಕೆಎಂಎಫ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.

2024ರ ಅ. 1ರಿಂದ ಪರಿಷ್ಕೃತ ವೇತನ ಸೌಲಭ್ಯ ನೀಡಬೇಕೆಂದು ಒತ್ತಾಯಿಸಲಾಗಿದೆ. ವೇತನ ಪರಿಷ್ಕರಣೆ ಬಗ್ಗೆ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular