HomeKarnatakaಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಕುಂಭಮೇಳದಲ್ಲಿಯೂ ಕಾಂಗ್ರೆಸ್ ರಾಜಕೀಯ: ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆ ಖಂಡನೀಯ: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ಚಿಂತನೆಗಳಿಗೆ ಕೊನೆ ಮೊದಲು ಎಂಬುದಿಲ್ಲ. ಸಮಯ ಸಿಕ್ಕಿದಾಗಲೆಲ್ಲಾ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಿಸುತ್ತಾರೆ. ಕುಂಭಸ್ನಾನದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಕುಂಭಮೇಳದಂತಹ ಪರಂಪರಾಗತ ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರಿಗೆ ಅನ್ಯ ಮತದ ಯಾತ್ರೆ – ಆಚರಣೆಗಳ ಬಗ್ಗೆ ಮಾತನಾಡುವ ಧಮ್‌ ಇದೆಯಾ? ಎಂದು ಪ್ರಶ್ನಿಸಿದೆ.

ಹಿಂದೂಗಳ ಸಹಿಷ್ಣುತೆಯನ್ನು ಜಾಸ್ತಿ ಪರೀಕ್ಷಿಸಬೇಡಿ. ಈಗಾಗಲೇ ಐಸಿಯು‌ನಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್, ಬಹುಸಂಖ್ಯಾತ ಸನಾತನ ಧರ್ಮೀಯರ ತಾಳ್ಮೆಯನ್ನು ಇನ್ನಷ್ಟು ಕೆಣಕಿದರೆ ಧೂಳೀಪಟವಾಗುವುದು ನಿಶ್ಚಿತ ಎಂದು ಎಚ್ಚರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗಂಗೆಯಲ್ಲಿ ಮಿಂದರೆ ಬಡತನ ನಿವಾರಣೆಯಾಗುತ್ತಾ ಎಂದು ಪ್ರಶ್ನಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular