HomeKarnatakaBREAKING: ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಕೇಸ್: ಅವಶೇಷಗಳಡಿ ಸಿಲುಕಿದ್ದ ಯುವಕ ಶವವಾಗಿ ಪತ್ತೆ

BREAKING: ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಕೇಸ್: ಅವಶೇಷಗಳಡಿ ಸಿಲುಕಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಸಾವನ್ನಪ್ಪಿದ್ದಾನೆ.

ಕಾರ್ಯಾಚರಣೆ ಮುಂದುವರೆದಂತೆ ಮುಂಜಾನೆ ಅವಶೇಷಗಳಡಿ ಸದ್ದಾಂ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿತ್ತು. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣೆಗೆ ಹರಸಾಹಸ ನಡೆಸಿದ್ದರು. ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ವರ್ಷದ ಹಿಂದೆ ಶಿಥಿಲಗೊಂಡು ಕುಸಿದಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕಟ್ಟಡ ದುರಸ್ತಿ ಕಾಮಗಾರಿ ವೇಳೆ ಮೇಲ್ಚಾವಣಿ ಪೂರ್ಣ ಕುಸಿದು ದುರಂತ ಸಂಭವಿಸಿದೆ. ಕೆಲವು ದಿನಗಳಿಂದ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡಿ ಪಾರಂಪರಿಕ ಮಾದರಿಯಲ್ಲಿ ಮರು ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 14 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹೊರಡಲು ಸಿದ್ದವಾಗುತ್ತಿದ್ದ ವೇಳೆ ಏಕಾಏಕಿ ಛಾವಣಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ. ಆದರೆ, ಸದ್ದಾಂ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular