BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಮಹಾತ್ಮ ಗಾಂಧೀಜಿ’ ಪ್ರಬಂಧ ಸ್ಪರ್ಧೆ ಏರ್ಪಡಿಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವಿಚಾರಗಳನ್ನು ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯುದ್ಧಕ್ಕೂ, ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ, ಮುತಾಂದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ಆದರೆ ಇತ್ತೀಚಿನ ದಿನಗಳಲ್ಲಿ ದ್ವೇಷ-ಹಿಂಸೆಯನ್ನು ಪ್ರತಿಪಾದಿಸುವ, ವಿಕೇಂದ್ರೀಕರಣವನ್ನು ದಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ ದೀನ-ದಲಿತ, ಮಹಿಳೆ, ಆದಿವಾಸಿ, ರೈತ ಕಾರ್ಮಿಕ ಮತ್ತು ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜೀಯವರ ವಿರುದ್ಧ, ಸ್ವಾತಂತ್ರ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರುಲು ಪ್ರಯತ್ನಿಸುತ್ತಿವೆ. ಜಾಗತಿಕ ಪರಿಸರದ ಬಿಕ್ಕಟ್ಟು ಹಿಂಸಾ ವಿನೋದ ಮುಂತಾದುವುಗಳಿಂದಾಗಿ ಗಾಂಧೀಜಿಯವರು ಪ್ರತಿಪಾದಿಸಿದ ನಿಲುವುಗಳು ದುಸ್ಥಿತಿಗೆ ತಲುಪುತ್ತಿರುತ್ತವೆ. ಈ ಹಿನ್ನಲೆಯಲ್ಲಿ, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರಗಳಿರುವುದರಿಂದ “21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯವನ್ನು ಸರ್ಕಾರಿ/ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ಭಾಷಣ/ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯವರು ಪ್ರತಿಪಾದಿಸಿರುವ ನಿಲುವುಗಳನ್ನು ಅರಿತುಕೊಳ್ಳಲು ಅವಕಾಶ ಒದಗಿಸುವಂತೆ ಸೂಚಿಸಲಾಗಿದೆ .

ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನ ನೀಡುವಂತೆಯೂ, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read