HomeKarnatakaಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ನಿಗಧಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಮೀಸಲಾತಿ ಮತ್ತು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular