BREAKING: ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ಜಾರಿಗೆ ಸಚಿವ ತಂಗಡಗಿ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರಾಜ್ಯದಾದ್ಯಂತ ಎಲ್ಲಾ ವ್ಯಾಪಾರ, ಉದ್ದಿಮೆ, ಶಿಕ್ಷಣ ಸಂಸ್ಥೆ ಹಾಗೂ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಗೆ ಸಂಬಂಧ ಅಂತಿಮ ಕರಡಿ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಜಾರಿಯಾಗಬೇಕು. ರಾಜ್ಯದ ಕೆಲವೇ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಆಗಬೇಕು. ಈ ಸಂಬಂಧ ಪೊಲೀಸರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read