SHOCKING: ಟಿಕ್ ಟಾಕ್ ನಲ್ಲಿ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ಪುತ್ರಿಗೆ ಗುಂಡಿಕ್ಕಿದ ತಂದೆ

ಟಿಕ್‌ ಟಾಕ್‌ ನಲ್ಲಿ ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರಾಕರಿಸಿದ ತನ್ನ 15 ವರ್ಷದ ಮಗಳನ್ನು ಪಾಕಿಸ್ತಾನಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಅಮೆರಿಕದಲ್ಲಿ ಜನಿಸಿದ ಪುತ್ರಿಯನ್ನು ಆತ ಮರ್ಯಾದಾ ಹತ್ಯೆ ಮಾಡಿದ್ದಾಗಿ ಆರೋಪಿಸಲಾಗಿದ್ದು, ಗುರುವಾರ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬುಧವಾರ ಬಂಧಿಸಲ್ಪಟ್ಟ ವ್ಯಕ್ತಿ ಇತ್ತೀಚೆಗೆ ತನ್ನ ಕುಟುಂಬವನ್ನು ಅಮೆರಿಕದಿಂದ ಪಾಕಿಸ್ತಾನಕ್ಕೆ ಸ್ಥಳಾಂತರಿಸಿದ್ದಾನೆ. ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ಮಂಗಳವಾರ ಗುಂಡಿನ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಬಾಬರ್ ಬಲೂಚ್ ಹೇಳಿದ್ದಾರೆ.

ಬಾಲಕಿಯ ತಂದೆ ಆರಂಭದಲ್ಲಿ ಅಪರಿಚಿತ ಬಂದೂಕುಧಾರಿ ತಮ್ಮ ಮಗಳನ್ನು ಕೊಂದಿದ್ದಾಗಿ ಹೇಳಿದ್ದ. ಆದರೆ ವಿಚಾರಣೆಗಾಗಿ ವಶಕ್ಕೆ ಪಡೆದ ನಂತರ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಹತ್ಯೆಗೆ ಸಂಬಂಧಿಸಿದಂತೆ ಆ ವ್ಯಕ್ತಿಯ ಭಾವನನ್ನು ಸಹ ಬಂಧಿಸಲಾಗಿದೆ. ಪಾಕಿಸ್ತಾನದಲ್ಲಿ 54 ಮಿಲಿಯನ್ ಜನರು ಬಳಸುವ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟಿಕ್‌ ಟಾಕ್‌ ನಲ್ಲಿ ಬಾಲಕಿ “ಆಕ್ಷೇಪಾರ್ಹ” ವಿಷಯ ಹಂಚಿಕೊಂಡಿದ್ದಕ್ಕೆ ಈ ಕೃತ್ಯವೆಸಗಿದ್ದಾರೆ. ತನಿಖೆಗಾಗಿ ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಕಸ್ಟಡಿಯಲ್ಲಿಡಲು ಕೋರ್ಟ್ ಅನುಮತಿ ನೀಡಿದೆ ಎಂದು ಬಲೋಚ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read