HomeKarnatakaBREAKING: ಸೆಂಟ್ರಿಂಗ್ ಕೆಲಸ ಮುಗಿಸಿ ಬರುವಾಗ ಅಪಘಾತ: ಟೆಂಪೋ ಪಲ್ಟಿಯಾಗಿ 10ಕ್ಕೂ ಅಧಿಕ ಕಾರ್ಮಿಕರಿಗೆ ಗಾಯ

BREAKING: ಸೆಂಟ್ರಿಂಗ್ ಕೆಲಸ ಮುಗಿಸಿ ಬರುವಾಗ ಅಪಘಾತ: ಟೆಂಪೋ ಪಲ್ಟಿಯಾಗಿ 10ಕ್ಕೂ ಅಧಿಕ ಕಾರ್ಮಿಕರಿಗೆ ಗಾಯ

ತುಮಕೂರು: ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಗ್ರಾಮದ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 10ಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರಿಗೆ ತೀವ್ರ ಗಾಯಗಳಾಗಿವೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular