HomeKarnatakaBIG NEWS : ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಮಹತ್ವದ...

BIG NEWS : ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ

ದಾವಣಗೆರೆ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಫೆಬ್ರವರಿ 14 ರಂದು ನಡೆಯಲಿದ್ದು ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು ಜನರಿಗೆ ಅನುಕೂಲ ಕಲ್ಪಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆಬ್ರವರಿ 5 ರಿಂದ 11 ರವರೆಗೆ ಒಟ್ಟು 5800 ಕ್ಯೂಸೆಕ್ಸ್ ನೀರು ಹರಿಸಲಾಗುವುದು.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ., ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆರ್.ರವಿಚಂದ್ರ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular