HomeKarnatakaBIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕಛೇರಿ ವೇಳೆಯಲ್ಲಿ ‘ಈ ನಿಯಮಗಳ...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕಛೇರಿ ವೇಳೆಯಲ್ಲಿ ‘ಈ ನಿಯಮಗಳ ಪಾಲನೆ’ ಕಡ್ಡಾಯ.!

ಬೆಂಗಳೂರು : ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ.

1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಮೂದಿಸಿ, ಮೇಲಾಧಿಕಾರಿಗಳ
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ನಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular