BIG NEWS: ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಕಡ್ಡಾಯ; ಮಹಾರಾಷ್ಟ್ರ ಸರ್ಕಾರದ ಮಹತ್ವದ ಆದೇಶ

ಮಹಾರಾಷ್ಟ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ-ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಭಾಷೆಯ ಬಳಕೆಯನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದು, ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಮರಾಠಿಯಲ್ಲೇ ವ್ಯವಹರಿಸಬೇಕು ಎಂದು ಸೂಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳು, ಸರ್ಕಾರಿ ನಿಗಮಗಳು ಮತ್ತು ಸರ್ಕಾರಿ ನೆರವಿನ ಸಂಸ್ಥೆಗಳಿಗೂ ಈ ನಿಯಮ ಅನ್ವಯಿಸಲಿದೆ.

ಸರ್ಕಾರಿ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಕಳೆದ ವರ್ಷ ಅಂಗೀಕರಿಸಲಾದ ಮರಾಠಿ ಭಾಷಾ ನೀತಿಯು ಸಾರ್ವಜನಿಕ ವ್ಯವಹಾರಗಳಲ್ಲಿ ಮರಾಠಿ ಬಳಕೆಯನ್ನು ಶಿಫಾರಸು ಮಾಡಿತ್ತು. ಭಾಷೆಯ ಸಂರಕ್ಷಣೆ, ಪ್ರಚಾರ ಮತ್ತು ಅಭಿವೃದ್ಧಿಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದಲ್ಲದೆ, ಎಲ್ಲಾ ಕಚೇರಿಗಳ ಪಿಸಿ (ವೈಯಕ್ತಿಕ ಕಂಪ್ಯೂಟರ್) ಕೀಬೋರ್ಡ್‌ಗಳಲ್ಲಿ ರೋಮನ್ ಅಕ್ಷರಗಳ ಜೊತೆಗೆ ಮರಾಠಿ ದೇವನಾಗರಿ ಅಕ್ಷರಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read