HomeKarnatakaBIG NEWS : ರಾಮನಗರ ; ಹಾಸ್ಟೆಲ್' ನಲ್ಲೇ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

BIG NEWS : ರಾಮನಗರ ; ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

ರಾಮನಗರ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.

19 ವರ್ಷದ ಅನಾಮಿಕಾ ಆತ್ಮಹತ್ಯೆ ಮಾಡಿಕೊಂಡವಳು. ಕೇರಳ ಮೂಲದ ಕಣ್ಣೂರಿನವರಾದ ಅನಾಮಿಕಾ, ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಹಾಸ್ಟೇಲ್ ರೂಂ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಬಾಗಿಲು ಬಡಿದರೂ ಹಾಸ್ಟೆಲ್ ರೂಂ ಬಾಗಿಲು ತೆರೆಯದಿದ್ದಾಗ ಕಿಟಕಿಯಿಂದ ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular