HomeKarnatakaBIG UPDATE: ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 5ಕ್ಕೇರಿಕೆ;ಒಂದೇ ಕುಟುಂಬದ ಐವರು ಬಲಿ!

BIG UPDATE: ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ: ಸಾವಿನ ಸಂಖ್ಯೆ 5ಕ್ಕೇರಿಕೆ;ಒಂದೇ ಕುಟುಂಬದ ಐವರು ಬಲಿ!

ಯಾದಗಿರಿ: ಯಾದಗಿರಿಯಲ್ಲಿ ಸಂಭವಿಸಿದ ಬಸ್ ಹಾಗೂ ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿದೆ. ಒಂದು ವರ್ಷದ ಮಗು ಹನುಮಂತ, ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಪವಿತ್ರಾ (5) ಹಾಗೂ ರಾಯಪ್ಪ (3) ಮೃತ ದುರ್ದೈವಿಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ಮಕ್ಕಳ ಜೊತೆ ದಂಪತಿ ಒಂದೇ ಬೈಕ್ ನಲ್ಲಿ ಸುರುಪುರದಿಂದ ತಿಂಥಣಿ ಕಡೆಗೆ ತೆರಳುತ್ತಿದ್ದರು. ಈ ವೇಳೆಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular