HomeKarnatakaBREAKING : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ 'ರೌಡಿಶೀಟರ್'...

BREAKING : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ‘ರೌಡಿಶೀಟರ್’ ಬರ್ಬರ ಹತ್ಯೆ.!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಕುಖ್ಯಾತ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಭೀಮಾ ತೀರದ ಹಂತಕ, ಕುಖ್ಯಾತ ರೌಡಿಶೀಟರ್ ಬಾಗಪ್ಪ ಹರಿಜನನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಬಾಗಪ್ಪ ಹರಿಜನ ಹಲವು ಕೊಲೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಮಂಗಳವಾರ ರಾತ್ರಿ ನಗರದ ರೇಡಿಯೋ ಕೇಂದ್ರದ ಬಳಿ ಬಾಗಪ್ಪನನ್ನು ದುಷ್ಮರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಥ ವಾಸವಾಗಿದ್ದನು. ಈತ ಮನೆಯಿಂದ ಹೊರ ಬರುತ್ತಿದ್ದಂತೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular