BREAKING NEWS: ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ, ರ್ಯಾಗಿಂಗ್: ಐವರು ವಿದ್ಯಾರ್ಥಿಗಳು ಅರೆಸ್ಟ್

ಕೊಟ್ಟಾಯಂ: ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ರ್ಯಾಗಿಂಗ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕೇರಳದ ಕೊಟ್ಟಾಯಂ ನಲ್ಲಿ ಈ ಘಟನೆ ನಡೆದಿದೆ. 3ನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ರ್ಯಾಗಿಂಗ್ ಆರೋಪ ಕೇಳಿಬಂದಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಕೈ-ಕಾಲು, ದೇಹದ ಹಲವೆಡೆ ಕೊಯ್ದು ಕೆಮಿಕಲ್ ಪೌಡರ್ ಹಾಕಿ ಅಮಾನುಷವಾಗಿ ನಡೆದುಕೊಂಡಿದ್ದಾರೆ.

ಕಿರಿಯ ವಿದ್ಯಾರ್ಥಿಗಳ ಕೈ-ಕಾಲು, ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ಪ್ರಕರಣ ಸಂಬಂಧ ಐವರು ಹಿರಿಯ ನರ್ಸಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read