ಶಿವಮೊಗ್ಗ : ಶಿವಮೊಗ್ಗದಲ್ಲಿ ಖಾಸಗಿ ಬಸ್ ಹರಿದು ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ. 
 ಮೃತ ವಿದ್ಯಾರ್ಥಿಯನ್ನು ಯಶವಂತ್ (16) ಎಂದು ಗುರುತಿಸಲಾಗಿದೆ.
ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯಶವಂತ್ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು, ಅದೇ ಬಸ್ ನ ಚಕ್ರಕ್ಕೆ ಸಿಲುಕಿ ಯಶವಂತ್ ಮೃತಪಟ್ಟಿದ್ದಾನೆ. ಹೊಳೆಬಸ್ ಸ್ಟಾಪ್ ಸಮೀಪ ಈ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		