HomeKarnatakaJOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ಬೃಹತ್ 'ಉದ್ಯೋಗ...

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಪ್ರೆಸಿಡೆನ್ಸಿ ಫೌಂಡೇಶನ್ ಫೆಬ್ರವರಿ 15 ರಂದು  ನಾಳೆ  ಕರ್ನಾಟಕದ ಯುವಕರಿಗೆ, ವಿಶೇಷವಾಗಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಿಗೆ ಸಹಾಯ ಮಾಡಲು ಉದ್ಯೋಗ ಮೇಳವನ್ನು ಆಯೋಜಿಸಿದೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಮತ್ತು ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತರು, ಎಸ್ಎಸ್ಎಲ್ಸಿ, ದ್ವಿತಿಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರು ಪಾಲ್ಗೊಳ್ಳಬಹುದಾಗಿದೆ. ಹೊಸಬರು ಮತ್ತು ಅನುಭವಸ್ಥರೂ ಕೂಡ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಮೇಳಕ್ಕೆ ಬರುವಾಗ 10 ರೆಸ್ಯೂಮ್ಗಳು ತರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ಮೇಳ ನಡೆಯುವ ಸ್ಥಳ

ನಗರದ ‘ಖುದ್ದೂಸ್ ಸಾಹಿಬ್ಸ್ ಈದ್ಗಾ ಮೈದಾನ, ಮಿಲ್ಲರ್ಸ್ ರಸ್ತೆ, ಕಂಟೋನ್ಮೆಂಟ್ ರೈಲ್ವೆ ಕಾರ್ಟ್ರ್ಸ್, ಬೆನ್ಸನ್ ಟೌನ್, ಬೆಂಗಳೂರು- 560046

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular