HomeKarnatakaBIG NEWS: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

BIG NEWS: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಎಲ್.ಆರ್.ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ ಕೂಡ ಇದೇ ವೇಳೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular