HomeKarnatakaBREAKING NEWS: ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

BREAKING NEWS: ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ.

ಚೇತನ್, ರೂಪಾಲಿ ದಂಪತಿ, ವೃದ್ಧೆ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರಿಗೆ ವಿಷ ನೀಡಿ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ.

ಕುಶಾಲ್(15), ಚೇತನ್(45), ರೂಪಾಲಿ(43), ಪ್ರಿಯಂವಧಾ(62) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ  ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿದ್ದಾರೆ. ನಾಲ್ವರು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular