HomeKarnatakaBREAKING : 'ತಹಶೀಲ್ದಾರ್' ನಕಲಿ ಸಹಿ ಬಳಸಿಕೊಂಡು 60 ಲಕ್ಷ ರೂ. ವಂಚನೆ : ಬೆಂಗಳೂರಲ್ಲಿ...

BREAKING : ‘ತಹಶೀಲ್ದಾರ್’ ನಕಲಿ ಸಹಿ ಬಳಸಿಕೊಂಡು 60 ಲಕ್ಷ ರೂ. ವಂಚನೆ : ಬೆಂಗಳೂರಲ್ಲಿ ‘RI’ ಅರೆಸ್ಟ್.!

ದೊಡ್ಡಬಳ್ಳಾಪುರ : ತಹಶೀಲ್ದಾರ್ ನಕಲಿ ಸಹಿ ಬಳಸಿಕೊಂಡು ಲಕ್ಷಾಂತರ ಹಣ ವಂಚಿಸಿದ ಆರೋಪದ ಮೇರೆಗೆ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (ಆರ್ ಐ ) ಹೇಮಂತ್ ಕುಮಾರ್ ನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಜರಾಯಿ ಇಲಾಖೆ ಎಫ್ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲವು ಕಂತುಗಳಲ್ಲಿ ತಹಶಿಲ್ದಾರ್ ಅವರ ನಕಲಿ ಸಹಿ ಬಳಸಿ  60 ಲಕ್ಷ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು, ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular