HomeKarnatakaಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ಆರೋಪ: ಕಂದಾಯ ಇಲಾಖೆಯಿಂದ ಸರ್ವೇ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ಆರೋಪ: ಕಂದಾಯ ಇಲಾಖೆಯಿಂದ ಸರ್ವೇ

ರಾಮನಗರ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕ ಪ್ರಕಾಶ್, ವಿಶಾಲಾಕ್ಷಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ.

35ಕ್ಕೂ ಹೆಚ್ಚು ಸರ್ವೇ ನಂಬರ್ ಗಳ ಜಮೀನುಗಳನ್ನು ಪರಿಶೀಲನೆ ನಡೆಸಲಾಗಿದೆ. 110 ಎಕರೆಗೂ ಹೆಚ್ಚು ಜಮೀನು ಸರ್ವೆ ನಡೆಸಲಾಗಿದೆ. ಕುಮಾರಸ್ವಾಮಿ ಮತ್ತು ಅವರ ಸಹೋದರಿಯ ಅನಸೂಯ ಮಂಜುನಾಥ್, ಅವರ ಸಂಬಂಧಿ ಡಿ.ಸಿ. ತಮ್ಮಣ್ಣ ಹೆಸರಿನಲ್ಲಿರುವ ಭೂಮಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು.

ಸಾಮಾಜಿಕ ಹೋರಾಟಗಾರರ ದೂರಿನ ಅನ್ವಯ ವರದಿಗೆ ಸೂಚನೆ ನೀಡಲಾಗಿತ್ತು. ವರದಿ ನೀಡುವಂತೆ ಹೈಕೋರ್ಟ್ ಕಂದಾಯ ಇಲಾಖೆಗೆ ಸೂಚನೆ ನೀಡಿತ್ತು. ಕಂದಾಯ ಇಲಾಖೆ ಅಧಿಕಾರಿಗಳಿಂದ ಹೆಚ್.ಡಿ. ಕುಮಾರಸ್ವಾಮಿ ಜಮೀನು ಸರ್ವೆ ಕಾರ್ಯ ನಡೆಸಲಾಗಿದ್ದು, ಸರ್ವೆ ನಡೆಸಿ ರಾಮನಗರ ಜಿಲ್ಲಾಧಿಕಾರಿಗೆ ಕಂದಾಯ ಅಧಿಕಾರಿಗಳು ವರದಿ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪದ ಬಗ್ಗೆ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ. ವರದಿ ನೀಡುವುದು ವಿಳಂಬವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ತಾಕೀತು ಮಾಡಿ ಶೀಘ್ರ ವರದಿ ನೀಡುವಂತೆ ಕಂದಾಯ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆಯ ಬೆನ್ನಲ್ಲೇ ಕಂದಾಯ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular