HomeIndiaSHOCKING NEWS: ಪ್ರಯಾಗ್ ರಾಜ್ ನೀರು ಸ್ನಾನಕ್ಕೂ ಯೋಗ್ಯವಲ್ಲ, ತ್ರಿವೇಣಿ ಸಂಗಮದ ನೀರಲ್ಲಿ ಮಿತಿಮೀರಿದ ಮಲ...

SHOCKING NEWS: ಪ್ರಯಾಗ್ ರಾಜ್ ನೀರು ಸ್ನಾನಕ್ಕೂ ಯೋಗ್ಯವಲ್ಲ, ತ್ರಿವೇಣಿ ಸಂಗಮದ ನೀರಲ್ಲಿ ಮಿತಿಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನದಿಯ ನೀರು ಅತ್ಯಂತ ಕಲುಷಿತವಾಗಿದ್ದು, ಸ್ನಾನಕ್ಕೂ ಯೋಗ್ಯವಲ್ಲ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ.

ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳ ಸಂಖ್ಯೆ ನೀರಿನಲ್ಲಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗಿದೆ. ತ್ರಿವೇಣಿ ಸಂಗಮ ಸೇರಿ ಪ್ರಯಾಗ್ ರಾಜ್ ನ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ನೀರಿನ ಮಾದರಿಯನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷೆಗೆ ಒಳಪಡಿಸಿ ಈ ವಿಷಯವನ್ನು ದೃಢಪಡಿಸಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನ ಗುಣಮಟ್ಟ ಕುರಿತ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣಕ್ಕೆ ಸಲ್ಲಿಸಿದ್ದು, ನ್ಯಾಯಾಧಿಕರಣ ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಾತ್ರವಲ್ಲ, ಉತ್ತರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಕಲುಷಿತ ನೀರಿನಲ್ಲಿ 50 ಕೋಟಿ ಜನ ಸ್ನಾನ ಮಾಡುವಂತೆ ಮಾಡಿದ್ದೀರಿ. ಸ್ನಾನಕ್ಕೂ ಯೋಗ್ಯವಲ್ಲದ ನೀರನ್ನು ಜನ ಕುಡಿಯಲು ಬಳಸಬೇಕೇ ಎಂದು ತರಾಟೆಗೆ ತೆಗೆದುಕೊಂಡಿದ್ದು, ವಿಸ್ತೃತ ವರದಿ ಸಲ್ಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular