HomeKarnatakaBIG NEWS: EMMVEE ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ; 10 ಸಾವಿರ...

BIG NEWS: EMMVEE ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ; 10 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಿದ್ದು ಕಾರ್ಯರೂಪಕ್ಕೆ ಬಂದಿದೆ. EMMVEE ಎನರ್ಜಿ ಕಂಪನಿಯಿಂದ ರೂ. 15 ಸಾವಿರ ಕೋಟಿ ಹೂಡಿಕೆ; 10 ಸಾವಿರ ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಗುಣಮಟ್ಟದ ಸೋಲಾರ್ ಫೋಟೋ ವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ EMMVEE ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ. ಈ ಸಂಬಂಧ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಯಿತು.

ಮೊದಲ ಹಂತದಲ್ಲಿ 5,000 ಕೋಟಿ ರೂ.ಹೂಡಿಕೆ ಮಾಡಲಿದ್ದು, 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಕಾರ್ಯರೂಪಕ್ಕೆ ಬರುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular