HomeKarnatakaJOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಫೆ. 24 ರಂದು ಶಿವಮೊಗ್ಗದಲ್ಲಿ...

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಫೆ. 24 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜ ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಯಾವುದೇ ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ http://forms.gle/se41paGCoRiexPPP9 ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255294/ 9019485688 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular