HomeKarnatakaBIG NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ವೇಳೆ...

BIG NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ವೇಳೆ ‘KSRTC’, ‘BMTC’ ಬಸ್’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.!

ಬೆಂಗಳೂರು : ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ.

ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ನೀಡಿ ಕರಾರಸಾ ನಿಗಮ ಹಾಗೂ ಬಿಎಂಟಿಸಿ  ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular