HomeKarnatakaSHOCKING: ತೋಟಕ್ಕೆ ಹೋಗುವಾಗಲೇ ದುರಂತ, ಹೆಜ್ಜೇನು ದಾಳಿಗೆ ರೈತ ಬಲಿ

SHOCKING: ತೋಟಕ್ಕೆ ಹೋಗುವಾಗಲೇ ದುರಂತ, ಹೆಜ್ಜೇನು ದಾಳಿಗೆ ರೈತ ಬಲಿ

ದಾವಣಗೆರೆ: ಹೆಜ್ಜೇನು ದಾಳಿಯಿಂದ ರೈತ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಹುಚ್ಚವ್ವನಹಳ್ಳಿಯಲ್ಲಿ ನಡೆದಿದೆ.

ಮುತ್ತಪ್ಪರ ನಾಗಪ್ಪ(72) ಮೃತಪಟ್ಟವರು ಎಂದು ಹೇಳಲಾಗಿದೆ. ನಾಗಪ್ಪ ತೋಟಕ್ಕೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಹೆಜ್ಜೆನು ಹುಳಗಳು ಕಚ್ಚಿ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಅವರು ತೋಟಕ್ಕೆ ಹೊರಟಿದ್ದ ವೇಳೆ ಏಕಾಏಕಿ ಭಾರಿ ಸಂಖ್ಯೆಯ ಹೆಜ್ಜೆನು ಹುಳಗಳು ದಾಳಿ ಮಾಡಿ ಕಚ್ಚಿವೆ. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ನಾಗಪ್ಪ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular