HomeKarnatakaBREAKING: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ: ಗ್ರಾಪಂ ಸದಸ್ಯ ಅರೆಸ್ಟ್

BREAKING: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ: ಗ್ರಾಪಂ ಸದಸ್ಯ ಅರೆಸ್ಟ್

ಚಾಮರಾಜನಗರ: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ದಂಧೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಸತ್ತೇಗಾಲ ಹ್ಯಾಂಡ್ ಪೋಸ್ಟ್ ಗ್ರಾಮ ಪಂಚಾಯತಿ ಸದಸ್ಯನನ್ನು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದು ಅವರನ್ನು ಬಂಧಿಸಲಾಗಿದೆ. ಐದು ವರ್ಷಗಳಿಂದ ಅಕ್ರಮವಾಗಿ ಆಟೋಗಳಿಗೆ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೆಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ.

ಪೊಲೀಸರ ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 5 ಸಿಲಿಂಡರ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಸಿದ್ದುನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular