HomeKarnatakaGOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದೇ ಖಾತೆಗೆ 'ಗೃಹಲಕ್ಷ್ಮಿ' ಹಣ ಜಮಾ...

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದೇ ಖಾತೆಗೆ ‘ಗೃಹಲಕ್ಷ್ಮಿ’ ಹಣ ಜಮಾ |Gruha Lakshmi Scheme

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ.

ಹೌದು, ಮಹಿಳೆಯರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲು ಮುಂದಾಗಿದೆ.

ನವೆಂಬರ್ ತಿಂಗಳ ಹಣ ಇಂದೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. ಹಾಗೂ ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಸೋಮವಾರ ಹಾಕಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ತಿಂಗಳ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದ್ದು, ಮಹಿಳೆಯರಿಗೆ ಕೊಂಚ ರಿಲೀಫ್ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ . ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪನಿರ್ದೇಶಕರ ಮೂಲಕ ಹಣ ಪಾವತಿಸಲಾಗುವುದು. ಆರ್ಥಿಕ ಇಲಾಖೆಯಿಂದ 15 ದಿನಗಳ ಹಿಂದೆಯೇ ಹಣ ಬಂದಿದೆ. ತಾಲೂಕು ಪಂಚಾಯಿತಿ ಕಚೇರಿಗಳಿಂದ ಇಲಾಖೆಗೆ ಹಣ ಬರುವುದು ವಿಳಂಬವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular