HomeKarnatakaBIG UPDATE : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ...

BIG UPDATE : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ 6 ಮಂದಿ ಸ್ಥಳದಲ್ಲೇ ಸಾವು.!

ಉತ್ತರ ಪ್ರದೇಶ : ಭೀಕರ ಅಪಘಾತಕ್ಕೆ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಮಿರಾಜಾಪೂರ್ ಜಿಲ್ಲೆಯ ರೂಪಾಪುರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಸುನೀತಾ (35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಂದೇ ಕುಟುಂಬದ 12 ಮಂದಿ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ತೆರಳಿದ್ದರು. ಪುಣ್ಯಸ್ನಾನ ಮಾಡಿದ ಬಳಿಕ ಪ್ರಯಾಗ್ ರಾಜ್ ನಿಂದ ಕಾಶಿಗೆ ತೆರಳುತ್ತಿದ್ದರು. ವೇಗವಾಗಿ ಬರುತ್ತಿದ್ದ ಕ್ರೂಸರ್ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಮೃತರನ್ನು ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular